ನೆತನ್ಯಾಹು ಕಣ್ಮರೆ? ಯುದ್ಧದ ಮಧ್ಯೆ ಹುಟ್ಟಿದ ಗಾಸಿಪ್‌ಗಳಿಗೆ ಸ್ಪಷ್ಟನೆ | Hosa Suddi

ದೇಶ

ನೆತನ್ಯಾಹು ಕಣ್ಮರೆ? ಯುದ್ಧದ ಮಧ್ಯೆ ಹುಟ್ಟಿದ ಗಾಸಿಪ್‌ಗಳಿಗೆ ಸ್ಪಷ್ಟನೆ

Published

on

Washington, D.C.: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ Iran–Israel conflict ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಇರಾನ್ ಮತ್ತು ಇಸ್ರೇಲ್–ಅಮೆರಿಕ ನಡುವೆ ನಡೆಯುತ್ತಿರುವ ಭೀಕರ ಕ್ಷಿಪಣಿ ದಾಳಿಗಳು ಇನ್ನೂ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ.

ಯುದ್ಧದ ಆರಂಭದಲ್ಲಿ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದೊಡ್ಡ ಮಟ್ಟದ ಕ್ಷಿಪಣಿ ದಾಳಿಗಳನ್ನು ನಡೆಸಿದ್ದವು. ಆದರೆ ಈಗ, ಇರಾನ್ ಸೇಡಿಗೆ ಪಣತೊಟ್ಟು Qatar ಹಾಗೂ Dubai ಸೇರಿದಂತೆ ಹಲವು ಪ್ರದೇಶಗಳ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದೆ ಎಂಬ ವರದಿಗಳು ಹೊರಬಂದಿವೆ.

ಈ ನಡುವೆ ಇಸ್ರೇಲ್ ಪ್ರಧಾನಿ Benjamin Netanyahu ಎಲ್ಲಿ ಇದ್ದಾರೆ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಅಮೆರಿಕದ ಸಂಪ್ರದಾಯವಾದಿ ರಾಜಕೀಯ ವಿಶ್ಲೇಷಕ Candace Owens ತಮ್ಮ X (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅವರು, ಇರಾನ್‌ನ ಪರಿಸ್ಥಿತಿಯ ಬಗ್ಗೆ ಅಮೆರಿಕದ ಅಧಿಕಾರಿಗಳು ಪಾರದರ್ಶಕವಾಗಿ ಮಾಹಿತಿ ನೀಡುತ್ತಿಲ್ಲ. “ಇರಾನ್‌ನಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ವಾಷಿಂಗ್ಟನ್ ಡಿ.ಸಿ. ಅಮೆರಿಕದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದಲ್ಲದೆ ನೆತನ್ಯಾಹು ಎಲ್ಲಿದ್ದಾರೆ? ಅವರ ಕಚೇರಿ ಏಕೆ ಎಐ ರಚಿತವಾದ ವಿಡಿಯೊಗಳನ್ನು ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡುತ್ತಿದೆ? ಶ್ವೇತಭವನದಲ್ಲಿ ಏಕೆ ಆತಂಕದ ವಾತಾವರಣ ನಿರ್ಮಾಣವಾಗಿದೆ? ಎಂಬ ಪ್ರಶ್ನೆಗಳನ್ನೂ ಅವರು ಎತ್ತಿದ್ದಾರೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ, ಟೀಕೆ ಮತ್ತು ಆಕ್ರೋಶಕ್ಕೆ ಕಾರಣವಾದ ಬಳಿಕ ನೆತನ್ಯಾಹು ಕಚೇರಿ ಸ್ಪಷ್ಟನೆ ನೀಡಿದೆ. ಇವುಗಳೆಲ್ಲ ನಕಲಿ ಸುದ್ದಿಗಳು. ಪ್ರಧಾನಿಗಳು ಸುರಕ್ಷಿತರಾಗಿದ್ದಾರೆ ಎಂದು ಕಚೇರಿ ತಿಳಿಸಿದೆ ಎಂದು Hindustan Times ವರದಿ ಮಾಡಿದೆ.

Trending

Exit mobile version