Connect with us

ಅಪರಾಧ

Latest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ

Published

on

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ಗುರುವಾರ ನಡೆದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮ ರಾಜಕೀಯ ಗಲಾಟೆಯಿಂದ ಕಂಗಾಲಾಯಿತು. ಫಲಾನುಭವಿಗಳಿಗೆ ಲಾಟರಿ ಮೂಲಕ 950 ಮನೆಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ಹಾಗೂ ತಳ್ಳಾಟ ಸಂಭವಿಸಿ ಕಾರ್ಯಕ್ರಮವನ್ನು ಅಧಿಕಾರಿಗಳು ಅರ್ಧದಲ್ಲೇ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಆಶ್ರಯ ಸಮಿತಿ ಅಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನಿಯಮಾನುಸಾರ ಮನೆ ಹಂಚಿಕೆ ನಡೆಯುತ್ತಿತ್ತು. ಇದೇ ವೇಳೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ತಮ್ಮ ಬೆಂಬಲಿಗರೊಂದಿಗೆ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಮನೆಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗೂ ತಮ್ಮ ಬೆಂಬಲಿಗರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಜೊತೆಗೆ ಸ್ಥಳೀಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದೇಕೆ ಎಂದು ಪ್ರಶ್ನಿಸಿದರು.

ಈ ವಿಚಾರವಾಗಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದರು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ ನಾಯಕ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಸ್ಥಳದಿಂದ ತೆರವುಗೊಳಿಸಿದರು.

ಗಲಾಟೆಯಿಂದ ಕಾರ್ಯಕ್ರಮ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮನೆ ಸಿಗುವ ನಿರೀಕ್ಷೆಯಲ್ಲಿ ಮಕ್ಕಳೊಂದಿಗೆ ಆಗಮಿಸಿದ್ದ ನೂರಾರು ಮಹಿಳೆಯರು ನಿರಾಶರಾದರು. ಈ ದೃಶ್ಯ ಕಂಡು ಭಾವುಕರಾದ ಶಾಸಕಿ ಶಶಿಕಲಾ ಜೊಲ್ಲೆ ಸ್ಥಳದಲ್ಲೇ ಕಣ್ಣೀರು ಹಾಕಿದರು. ಬಳಿಕ ಮಾತನಾಡಿದ ಅವರು, “ಬಡ ಜನರಿಗೆ ಮನೆ ಸಿಗಬಾರದು ಎಂಬ ರಾಜಕೀಯ ಸ್ವಾರ್ಥದಿಂದ ಕೆಲವರು ಕಾರ್ಯಕ್ರಮ ಹಾಳು ಮಾಡಿದ್ದಾರೆ” ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಅಪರಾಧ

Sakleshpur ದಲ್ಲಿ ಕಾಡಾನೆ ಭೀಮನ ಮೇಲೆ ಕಲ್ಲು ತೂರಾಟ: ಕಾರ್ಮಿಕನ ವಿರುದ್ಧ ಆಕ್ರೋಶ

Published

on

ಹಾಸನ: Sakleshpur ತಾಲೂಕಿನ ಒಸ್ಸೂರು ಎಸ್ಟೇಟ್‌ನಲ್ಲಿ ಜನಪ್ರಿಯ ಕಾಡಾನೆ ಭೀಮ (Elephant Bhima) ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಾಣಿ ಪ್ರಿಯರು ಮತ್ತು ಸ್ಥಳೀಯರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಾಹಿತಿಯ ಪ್ರಕಾರ, ಅಸ್ಸಾಂ ಮೂಲದ ಕಾರ್ಮಿಕರು ವಾಸಿಸುತ್ತಿರುವ ಲೈನ್ ಮನೆಗಳ ಸಮೀಪ ಇಂದು (ಜುಲೈ 14) ಬೆಳಿಗ್ಗೆ ಕಾಡಾನೆ ಭೀಮ ಸಾಗುತ್ತಿತ್ತು. ಈ ವೇಳೆ ಕಾರ್ಮಿಕನೊಬ್ಬ ಕಾಡಾನೆಯತ್ತ ಪದೇಪದೇ ಕಲ್ಲು ತೂರಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಕಲ್ಲು ತಗುಲುತ್ತಿದ್ದಂತೆ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು ಯತ್ನಿಸಿದರೂ, ಬಳಿಕ ಅಲ್ಲಿಂದ ಓಡಿ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೂ ತೊಂದರೆ ನೀಡದೆ ಶಾಂತ ಸ್ವಭಾವದಿಂದ ಗ್ರಾಮಗಳು ಹಾಗೂ ರಸ್ತೆಗಳ ಮೂಲಕ ಸಂಚರಿಸುವ ಭೀಮನಿಗೆ ಈ ರೀತಿ ಹಿಂಸೆ ನೀಡಿರುವುದು ಖಂಡನೀಯ ಎಂದು ಪ್ರಾಣಿ ಪ್ರಿಯರು ಅಭಿಪ್ರಾಯಪಟ್ಟಿದ್ದಾರೆ.

ಮಲೆನಾಡು ಭಾಗದ ಜನರ ಪ್ರೀತಿಗೆ ಪಾತ್ರವಾಗಿರುವ ಭೀಮ, ಹಲವು ವರ್ಷಗಳಿಂದ ಸಕಲೇಶಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಕ್ತವಾಗಿ ಓಡಾಡುತ್ತಿದ್ದು, ವಾಹನ ದಟ್ಟಣೆ ಇರುವ ರಸ್ತೆಗಳಲ್ಲೂ ಯಾರಿಗೂ ಹಾನಿ ಮಾಡದೆ ಸಂಚರಿಸುವ ಕಾಡಾನೆ ಎಂದು ಸ್ಥಳೀಯರು ಹೇಳುತ್ತಾರೆ.

ವೈರಲ್ ಆಗಿರುವ ವಿಡಿಯೋ ಆಧರಿಸಿ ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ವನ್ಯಜೀವಿಗೆ ಕಿರುಕುಳ ನೀಡಿದ ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ. ಈ ಘಟನೆ ಮತ್ತೊಮ್ಮೆ ವನ್ಯಜೀವಿಗಳ ಸಂರಕ್ಷಣೆ ಮತ್ತು ಮಾನವ-ಪ್ರಾಣಿ ಸಹಬಾಳ್ವೆಯ ಕುರಿತು ಚರ್ಚೆಗೆ ಕಾರಣವಾಗಿದೆ.

Continue Reading

ಅಪರಾಧ

Bidadi Township ವಿವಾದ ತೀವ್ರ: 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್

Published

on

ರಾಮನಗರ: Bidadi Township ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ನಡುವೆ, ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ.

Continue Reading

ಬೆಂಗಳೂರು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು

Published

on

ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.

ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ ಕೆಪಿಎಸ್‌ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಬೆಳವಣಿಗೆಯಿಂದ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

Continue Reading

Trending