ರಾಜ್ಯ
Pavan Kalyan ಬಿಡುಗಡೆಯಕ್ಕೂ ಮುನ್ನವೇ ರೆಕಾರ್ಡ್ ಮಾಡಿದ ಪವನ್ ಕಲ್ಯಾಣ್ ‘ಓಜಿ’ ಸಿನಿಮಾ ಟಿಕೆಟ್ — ಅಭಿಮಾನಿಯಿಂದ ₹1.29 ಲಕ್ಷ ಖರೀದಿ!
ಹೈದರಾಬಾದ್: ಪವನ್ ಕಲ್ಯಾಣ್ ಅಭಿಮಾನಿಯೊಬ್ಬನು ಒಂದು ಚಿತ್ರ ಟಿಕೆಟ್ ಗೆ ₹1,29,999 ರೂಪಾಯಿ ಕೊಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಪವರ್ ಸ್ಟಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಓಜಿ’ (OG) ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಪ್ರಯುಕ್ತ ಈ ಟಿಕೆಟ್ ಹರಾಜು ಮಾಡಲಾಗಿತ್ತು.
ಚೌಟುಪ್ಪಲ್‌ನ ಅಮುದಲ ಪರಮೇಶ್ ಎಂಬ ಅಭಿಮಾನಿಯು ಈ ಟಿಕೆಟ್ ಖರೀದಿ ಮಾಡಿ ಪವನ್ ಮೇಲಿನ ತನ್ನ ಭಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾನೆ. ಈ ಟಿಕೆಟ್‌ನ ಮೂಲ ಬೆಲೆ ಕೇವಲ ₹800 ರೂಪಾಯಿ ಮಾತ್ರವಿದ್ದು, ಲಕ್ಷಕ್ಕಿಂತ ಅಧಿಕ ಹಣ ಕೊಟ್ಟು ಈ ಟಿಕೆಟ್ ಖರೀದಿಸಲಾಗಿದೆ.
ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನಟನಿಗಾಗಿ ಫ್ಲೆಕ್ಸ್, ಕಟ್‌ಔಟ್, ಬ್ಯಾನರ್ ಹಾಕುತ್ತಾರೆ. ಆದರೆ, ಪವನ್ ಕಲ್ಯಾಣ್ ಅಭಿಮಾನಿಗಳು ಅಷ್ಟರಲ್ಲಿ ನಿಂತಿಲ್ಲ — ಪ್ರೀತಿಗೆ ಬೆಲೆ ಇಲ್ಲ ಅನ್ನೋ ಮಾತಿಗೆ ನಿಜವಾದ ಉದಾಹರಣೆಯಾಗಿದೆ ಈ ಘಟನೆ.
ಇನ್‌ಸ್ಟಾಗ್ರಾಂ ಮತ್ತು X (Twitter) ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸುದ್ದಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಪರಮೇಶ್ ಅವರನ್ನು “ರಿಯಲ್ ಫ್ಯಾನ್” ಎಂದು ಹೊಗಳುತ್ತಿದ್ದಾರೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!
ಐಐಹೆಚ್‌ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು
Nalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
ಬೆಂಗಳೂರು: ಜೆ.ಪಿ.ನಗರದಲ್ಲಿರುವ ಪ್ರತಿಷ್ಠಿತ ನNalanda English Medium School ವಾರ್ಷಿಕೋತ್ಸವ ಹಲವು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ S.Janaki ಅವರ ವಿವಿಧ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯನ ಹಾಗೂ ನೃತ್ಯದ ಮೂಲಕ ಪ್ರಸ್ತುತಪಡಿಸಿ ಗಾನಕೋಗಿಲೆಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮಕ್ಕೆ ಮಿಸ್ ಇಂಡಿಯಾ ಕಿರೀಟ ವಿಜೇತೆ, ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅಗತ್ಯ ಎಂದು ಹೇಳಿದರು.
ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ಸ್ಮೀತಾಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನಮನ
ವಾರ್ಷಿಕೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಎಸ್. ಜಾನಕಿ ಅವರ ವಿವಿಧ ಭಾಷೆಗಳ ಹಾಡುಗಳನ್ನು ಗಾಯನ ಮತ್ತು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಸಂಗೀತ ಹಾಗೂ ನೃತ್ಯದ ಸುಂದರ ಸಂಯೋಜನೆ ಪ್ರೇಕ್ಷಕರ ಗಮನ ಸೆಳೆಯಿತು.
ವಿದ್ಯಾರ್ಥಿಗಳ ಈ ವಿಶೇಷ ಪ್ರದರ್ಶನದ ಮೂಲಕ ಅಗಲಿದ ಹಿರಿಯ ಗಾಯಕಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಪಾಲಕರು ಹಾಗೂ ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸ್ಮೀತಾಪ್ರಭು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
-
ಬೆಂಗಳೂರು22 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ21 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ24 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ23 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ಕ್ರೀಡೆ24 ಗಂಟೆಗಳು agoIndia vs Panama: ವಿಶ್ವಕಪ್ ಆಡಿದ ಪನಾಮ ವಿರುದ್ಧ ಭಾರತ ಸೆಣಸು; ಪಂದ್ಯಕ್ಕೆ ದಿನಾಂಕ ಫಿಕ್ಸ್
-
ದೇಶ23 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
