ದೇಶ
PM Narendra Modi : ವದಂತಿಗಳಿಗೆ ಕಿವಿಗೊಡಬೇಡಿ: ಜನರಿಗೆ ಪ್ರಧಾನಿ ಸಂದೇಶ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗುತ್ತಿರುವ ಸಂಕಷ್ಟವನ್ನು ಎದುರಿಸಲು ದೇಶದ ಎಲ್ಲ ನಾಗರಿಕರು ಒಂದಾಗಿ ನಿಲ್ಲಬೇಕು ಎಂದು Narendra Modi ಕರೆ ನೀಡಿದ್ದಾರೆ.
‘Mann Ki Baat’ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ Strait of Hormuzನಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರ ನೀಡುವ ಮಾಹಿತಿಗಳನ್ನೇ ನಂಬಬೇಕು ಎಂದು ಅವರು ಮನವಿ ಮಾಡಿದರು.
ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ 1 ಕೋಟಿಗೂ ಹೆಚ್ಚು ಭಾರತೀಯರಿಗೆ ಸಹಾಯ ಒದಗಿಸಿರುವ ಆ ದೇಶಗಳಿಗೆ ಪ್ರಧಾನಿ ಕೃತಜ್ಞತೆ ವ್ಯಕ್ತಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ಕಳೆದ ಒಂದು ತಿಂಗಳಿನಿಂದ ಯುದ್ಧ ತೀವ್ರವಾಗಿದ್ದು, ಇದು ಜಾಗತಿಕ ಮಟ್ಟದಲ್ಲಿ ಸವಾಲಿನ ಪರಿಸ್ಥಿತಿ ತಂದೊಡ್ಡಿದೆ ಎಂದರು.
“ಇದು ದೇಶದ 140 ಕೋಟಿ ಜನರಿಗೂ ಸಂಬಂಧಿಸಿದ ವಿಷಯ. ಇಂತಹ ಸಂದರ್ಭದಲ್ಲಿ ಕೆಲವರು ವದಂತಿಗಳನ್ನು ಹಬ್ಬಿಸುವುದು ದೇಶಕ್ಕೆ ಹಾನಿಕಾರಕ. ಎಲ್ಲರೂ ಎಚ್ಚರಿಕೆಯಿಂದಿದ್ದು, ರಾಜ್ಯ ಸರ್ಕಾರಗಳು ನೀಡುವ ಸೂಚನೆಗಳನ್ನು ಪಾಲಿಸಬೇಕು,” ಎಂದು ಹೇಳಿದರು.
ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಇಂಧನ ಸಂಕಷ್ಟ ಎದುರಾಗಿದ್ದು, ದಿನನಿತ್ಯದ ಅಗತ್ಯಗಳ ಮೇಲೂ ಪರಿಣಾಮ ಬೀರಿದೆ. ಆದರೂ ಭಾರತ ಈ ಸವಾಲನ್ನು ದೃಢವಾಗಿ ಎದುರಿಸುತ್ತಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.