“ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್” ಎಂದ ಸೂಪರ್‌ಸ್ಟಾರ್ ರಜನಿಕಾಂತ್ | Hosa Suddi

ದೇಶ

“ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್” ಎಂದ ಸೂಪರ್‌ಸ್ಟಾರ್ ರಜನಿಕಾಂತ್

Published

on

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (Rajanikanth) ನಟನೆಯ 173ನೇ ಸಿನಿಮಾಗೆ ಸಂಬಂಧಿಸಿದಂತೆ ತಲೈವಾ ಭಾರಿ ಅಪ್‌ಡೇಟ್ ನೀಡಿದ್ದಾರೆ. ಬಹು ನಿರೀಕ್ಷಿತ ಈ ಸಿನಿಮಾವನ್ನು ಕಮಲ್ ಹಾಸನ್ (Kamal Haasan) ಅವರ ರಾಜ್ ಕಮಲ್ ಫಿಲಂಸ್ ಇಂಟರ್‌ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಸುದ್ದಿ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

ಆರಂಭದಲ್ಲಿ ಈ ಚಿತ್ರಕ್ಕೆ ನಿರ್ದೇಶಕ ಸುಂದರ್.ಸಿ ಕೈಜೋಡಿಸಿದ್ದರು. ಅಧಿಕೃತ ಘೋಷಣೆಯೂ ನಡೆದಿತ್ತು. ಆದರೆ ಕೆಲವು ಕಾರಣಗಳಿಂದ ಅವರು ಯೋಜನೆಯಿಂದ ಹೊರಬಂದಿದ್ದರು. ಇದೀಗ ಈ ಸಿನಿಮಾವನ್ನು ಯುವ ನಿರ್ದೇಶಕ ಸಿಬಿ ಚಕ್ರವರ್ತಿ ನಿರ್ದೇಶನ ಮಾಡುತ್ತಿದ್ದಾರೆ. ತಲೈವರ್ 173 ಸಿನಿಮಾ ಇದೇ ವರ್ಷ ಏಪ್ರಿಲ್ ತಿಂಗಳಿಂದ ಚಿತ್ರೀಕರಣ ಆರಂಭಿಸುವ ಯೋಜನೆ ರೂಪಿಸಲಾಗಿದೆ.

ಸಂಕ್ರಾಂತಿ ಹಬ್ಬದ ದಿನ ತಮ್ಮ ಚೆನ್ನೈ ನಿವಾಸದ ಮುಂದೆ ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ರಜನಿಕಾಂತ್ ಕೈಬೀಸಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇನ್ನೂ ಹೆಸರಿಡದ ತಮ್ಮ 173ನೇ ಸಿನಿಮಾದ ಬಗ್ಗೆ ಮೊದಲ ಬಾರಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಈ ಸಿನಿಮಾ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನ್ಮೆಂಟ್ ಆಗಿರಲಿದೆ. ಅಭಿಮಾನಿಗಳಿಗೆ ಸಂಪೂರ್ಣ ಮನರಂಜನೆ ನೀಡುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ರಜನಿಕಾಂತ್ ಹೇಳಿದ್ದಾರೆ. ಈ ಮಾತುಗಳು ಹೊರಬಿದ್ದ ತಕ್ಷಣವೇ ಸೋಷಿಯಲ್ ಮೀಡಿಯಾದಲ್ಲಿ ರಜನಿಕಾಂತ್ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಕಮಲ್ ಹಾಸನ್ ನಿರ್ಮಾಣ, ರಜನಿಕಾಂತ್ ಅಭಿನಯ ಮತ್ತು ಹೊಸ ನಿರ್ದೇಶಕರ ಸಂಯೋಜನೆಯಿಂದ ತಲೈವರ್ 173 ಸಿನಿಮಾ ತಮಿಳು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ.

Trending

Exit mobile version