ರಾಜ್ಯ
“ಕನ್ನಡದ ಕಾದಂಬರಿ ಚಕ್ರವರ್ತಿ ಭೈರಪ್ಪ 95: ಸಾಹಿತ್ಯ ಲೋಕದ ಅಜಯ ನಾಯಕ”
ಚಾಮರಾಜನಗರ: ಭಾರತೀಯ ತತ್ವ, ಸಂಸ್ಕೃತಿ, ಇತಿಹಾಸ ಮತ್ತು ಮಾನವತೆಯ ಅಂಶಗಳನ್ನು ಆಳವಾಗಿ ಪ್ರತಿಬಿಂಬಿಸುವ ಕೃತಿಗಳ ಮೂಲಕ ಕನ್ನಡ ಸಾಹಿತ್ಯದ ಗಗನಚುಂಬಿ ಶಿಖರವಾಗಿರುವ ಎಸ್ ಎಲ್ ಭೈರಪ್ಪ ಅವರು ಭಾರತೀಯ ಸಾಹಿತ್ಯ ಲೋಕದಲ್ಲಿ ಅಪಾರವಾದ ಹೆಸರು ಗಳಿಸಿದ್ದಾರೆ. 95ನೇ ಜನ್ಮದಿನದ ಅಂಗವಾಗಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಋಗ್ವೇದಿ ಯೂತ್ ಕ್ಲಬ್ ಅವರ ಸಾಧನೆಗಳನ್ನು ಸ್ಮರಿಸಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ, “ಎಸ್ ಎಲ್ ಭೈರಪ್ಪ ನವಲಕಥೆಗಳು ಕನ್ನಡಿಗರ ಹೆಮ್ಮೆ. ಅವರ ‘ಪರ್ವ’ ಕೃತಿ ಮಹಾಭಾರತದ ನವವೀಕ್ಷಣೆ ನೀಡುವ ವೈಚಾರಿಕ ಸಾಹಿತ್ಯವಾಗಿದೆ,” ಎಂದು ಹೇಳಿದರು. ಭೈರಪ್ಪ ಅವರ ದಾಟು, ಗೃಹಭಂಗ, ವಂಶವೃಕ್ಷ, ಸಾರ್ಥ, ಮಂತ್ರ, ತಂತು, ಆವರಣ ಮುಂತಾದ ಕೃತಿಗಳು ಕೋಟಿ ಓದುಗರಿಗೆ ಆಲೋಚನೆಗೆ ಎಡೆಮಾಡಿವೆ ಎಂದು ಪ್ರಶಂಸೆ ಸಲ್ಲಿಸಿದರು.
ಅವರ ಕಾದಂಬರಿಗಳು ನಾಟಕ, ಚಲನಚಿತ್ರ ಮತ್ತು ಧಾರಾವಾಹಿಗಳ ರೂಪದಲ್ಲಿ ದೇಶ-ವಿದೇಶಗಳಲ್ಲಿ ಪ್ರಸಾರವಾಗಿದ್ದು, ಮಾನವ ಸಂಬಂಧಗಳ, ಗ್ರಾಮೀಣ ಜೀವನದ ಹಾಗೂ ಭಾರತೀಯ ತತ್ವಗಳ ವಿಶಿಷ್ಟ ಚಿತ್ರಣವನ್ನು ನೀಡಿದ್ದಾರೆ. ಭಾರತೀಯ ಸಂಸ್ಕೃತಿಯ ಜೀವಂತ ರೂಪವಾಗಿದೆ ಭೈರಪ್ಪ ಅವರ ಸಾಹಿತ್ಯ ಎಂದು ಕಾರ್ಯಕ್ರಮದ ಮುಖ್ಯಅತಿಥಿಗಳಾದ ರಾಜಗೋಪಾಲ್ ಅವರು ಹೇಳಿದರು.
ಈ ಕಾರ್ಯಕ್ರಮದ ಸಮಯದಲ್ಲಿ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಭೈರಪ್ಪನವರ ಸೇವೆ ಮತ್ತು ಸಾಹಿತ್ಯ ಸಾಧನೆಗೆ ದೇಶದಾದ್ಯಾಂತ ಗೌರವ ನೀಡಬೇಕಿದೆ ಎಂಬ ಮನವಿಯೂ ಈ ಸಂದರ್ಭ ಎತ್ತಿಹಿಡಿಯಲಾಯಿತು.
ರಾಜ್ಯ
Karnataka SIR ಅಭಿಯಾನಕ್ಕೆ ಭರ್ಜರಿ ವೇಗ; ಶೇ.92.95 ಕೆಲಸ ಪೂರ್ಣ
ಬೆಂಗಳೂರು: Karnataka SIR ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ರಾಜ್ಯವು ಮಹತ್ವದ ಮೈಲಿಗಲ್ಲು ತಲುಪಿದೆ. ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯಾದ್ಯಂತ SIR ಗಣತಿ ಕಾರ್ಯವು ಈಗಾಗಲೇ ಶೇ.92.95ರಷ್ಟು ಪೂರ್ಣಗೊಂಡಿದ್ದು, 5.15 ಕೋಟಿಗೂ ಅಧಿಕ ಗಣತಿ ಅರ್ಜಿಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ.
ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವುದು, ನಕಲಿ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಅರ್ಹ ಮತದಾರರ ಮಾಹಿತಿಯನ್ನು ಮರುಪರಿಶೀಲಿಸುವ ಉದ್ದೇಶದಿಂದ ಈ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ವಿತರಿಸಲಾದ 5.15 ಕೋಟಿ ಅರ್ಜಿಗಳ ಪೈಕಿ ಹೆಚ್ಚಿನ ಸಂಖ್ಯೆಯ ನಮೂನೆಗಳನ್ನು ಮತದಾರರು ಭರ್ತಿ ಮಾಡಿ ಸಹಿಯೊಂದಿಗೆ ಅಧಿಕಾರಿಗಳಿಗೆ ವಾಪಸ್ ಸಲ್ಲಿಸಿದ್ದಾರೆ. ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಶೇ.100ರಷ್ಟು ಅರ್ಜಿ ವಿತರಣೆ ಪೂರ್ಣಗೊಂಡಿದ್ದು, ಉಳಿದ ಪ್ರದೇಶಗಳಲ್ಲಿಯೂ ಶೀಘ್ರದಲ್ಲೇ ಗುರಿ ತಲುಪುವ ವಿಶ್ವಾಸವನ್ನು ಚುನಾವಣಾ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಚುನಾವಣಾ ಆಯೋಗದ ಪ್ರಕಾರ, ಮತದಾರರ ಪಟ್ಟಿಯಲ್ಲಿ ಹೆಸರು ಸುರಕ್ಷಿತವಾಗಿರಲು SIR ನಮೂನೆಯನ್ನು ನಿಗದಿತ ಅವಧಿಯಲ್ಲಿ ಭರ್ತಿ ಮಾಡಿ ಸಲ್ಲಿಸುವುದು ಅತ್ಯಂತ ಮಹತ್ವದ್ದಾಗಿದೆ. ಅರ್ಜಿಯನ್ನು ಭರ್ತಿ ಮಾಡಿ ವಾಪಸ್ ನೀಡದಿದ್ದರೆ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಭೌತಿಕವಾಗಿ ಅರ್ಜಿ ಸಲ್ಲಿಸುವುದರ ಜೊತೆಗೆ ಆನ್‌ಲೈನ್ ಮೂಲಕವೂ ನಮೂನೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ದಾಖಲಾಗಿರುವ ಶೇ.92.95ರಷ್ಟು ಪ್ರಗತಿಯು ದೇಶದ ಅತ್ಯುತ್ತಮ ಸಾಧನೆಗಳಲ್ಲಿ ಒಂದಾಗಿದ್ದು, ಉಳಿದ ಕಾರ್ಯವನ್ನು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಲು ಚುನಾವಣಾ ಇಲಾಖೆ ಸಜ್ಜಾಗಿದೆ.
ದೇಶ
Kadapa ದಲ್ಲಿ ಕೋವಿಡ್ ಆತಂಕ; ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ
ಆಂಧ್ರಪ್ರದೇಶ: ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 (Covid-19) ಸೋಂಕಿನ ಆತಂಕ ಮತ್ತೊಮ್ಮೆ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಳ್ಳತೊಡಗಿದೆ. ವೈಎಸ್‌ಆರ್ ಕಡಪ ಜಿಲ್ಲೆಯಲ್ಲೇ ಇತ್ತೀಚೆಗೆ ಎಂಟು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಆರೋಗ್ಯ ಇಲಾಖೆಯನ್ನು ಎಚ್ಚರಕ್ಕೆ ತಂದಿದೆ.
ಮೃತರಲ್ಲಿ ರಾಜಂಪೇಟೆಯ 52 ವರ್ಷದ ವ್ಯಕ್ತಿಯೊಬ್ಬರು ವೇಲ್ಲೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ 43 ವರ್ಷದ ವ್ಯಕ್ತಿ ಕಡಪ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಇದೇ ವೇಳೆ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರಿಗೂ ಸೋಂಕು ದೃಢಪಟ್ಟಿದ್ದು, ಅವರು ಸದ್ಯ ಗೃಹಬಂಧನದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಪ್ರಕರಣಗಳು ಬೆಳಕಿಗೆ ಬಂದ ತಕ್ಷಣ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ. ಸೋಂಕು ಪೀಡಿತ ಪ್ರದೇಶಗಳಿಂದ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪ್ರಸ್ತುತ ಹರಡುತ್ತಿರುವ ವೈರಸ್ ಯಾವ ರೂಪಾಂತರಕ್ಕೆ ಸೇರಿದೆ ಎಂಬುದನ್ನು ತಿಳಿಯಲು ಮಾದರಿಗಳನ್ನು ಪುಣೆಯ ಪ್ರಯೋಗಾಲಯಕ್ಕೆ ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ರವಾನಿಸಲಾಗಿದೆ.
ರಾಜ್ಯದ ಜಿಲ್ಲಾ ಉಸ್ತುವಾರಿ ಸಚಿವೆ ಸವಿತಾ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲು ಸೂಚಿಸಿದ್ದಾರೆ. ಸಾರ್ವಜನಿಕರು ಹೆಚ್ಚು ಜನಸಂದಣಿ ಇರುವ ಪ್ರದೇಶಗಳು ಹಾಗೂ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ವೈದ್ಯಕೀಯ ಇಲಾಖೆ ಸಲಹೆ ನೀಡಿದೆ.
ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್‌ಗಳು ಮತ್ತು ಅಗತ್ಯ ಹಾಸಿಗೆಗಳನ್ನು ಸಜ್ಜುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಾಗರಿಕರು ಅನಗತ್ಯ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು
Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.
ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.
-
ಬೆಂಗಳೂರು16 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ15 hours agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ಸುತ್ತ ಮುತ್ತ18 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ17 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ದೇಶ16 hours agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ರಾಜ್ಯ19 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ರಾಜ್ಯ23 hours agoಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿಗೆ ಅಂತಿಮ ನಮನ; ಅಭಿಮಾನಿಗಳ ಕಣ್ಣೀರಿನ ಸಾಗರ
-
ಕ್ರೀಡೆ17 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
