ದೇಶ

ಮಸೀದಿ ತೆರವು ವಿರೋಧಿಸಿ ಪ್ರತಿಭಟನೆ: Ujjain ಯಲ್ಲಿ ಪೊಲೀಸರೊಂದಿಗೆ ಘರ್ಷಣೆ

Published

on

ಉಜ್ಜಯಿನಿ: ಮಧ್ಯಪ್ರದೇಶದ Ujjain ಯಲ್ಲಿ ಸಿಂಹಸ್ಥ ಕುಂಭಮೇಳ-2028ರ ಸಿದ್ಧತೆಗಳ ಭಾಗವಾಗಿ ಕೈಗೆತ್ತಿಕೊಂಡಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಶಾಹಿ ಮಸೀದಿಯ ಒಂದು ಭಾಗ ತೆರವು ವಿಚಾರ ಉದ್ವಿಗ್ನತೆಗೆ ಕಾರಣವಾಗಿದೆ. ಸೋಮವಾರ ಸ್ಥಳದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟದ ಬಳಿಕ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ. RAF ಸೇರಿದಂತೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಉಜ್ಜಯಿನಿಯಲ್ಲಿ ಸಿಂಹಸ್ಥ 2028ರ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಇತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದೆ. ರಸ್ತೆ ಅಗಲೀಕರಣ ಯೋಜನೆಯಡಿ 272 ಕಟ್ಟಡಗಳು ಅಥವಾ ರಚನೆಗಳು ಪರಿಣಾಮಕ್ಕೆ ಒಳಗಾಗಲಿವೆ ಎಂದು ವರದಿಯಾಗಿದೆ. ಶಾಹಿ ಮಸೀದಿಯ ರಸ್ತೆ ಬದಿಗೆ ಬರುವ ಭಾಗವನ್ನು ತೆರವುಗೊಳಿಸುವ ಕ್ರಮಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಪೊಲೀಸರೊಂದಿಗೆ ಪ್ರತಿಭಟನಾಕಾರರ ಘರ್ಷಣೆ

ಮಸೀದಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು. ಪರಿಸ್ಥಿತಿ ಬಿಗಡಾಯಿಸಿದ ಸಂದರ್ಭದಲ್ಲಿ ಪೊಲೀಸರತ್ತ ಕಲ್ಲು ತೂರಾಟ ನಡೆದಿದೆ ಎಂದು ವರದಿಗಳು ತಿಳಿಸಿವೆ. ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದು, ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಸ್ಥಳದಲ್ಲಿ RAF ಮತ್ತು ಇತರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಸಿಂಹಸ್ಥ 2028ರ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ

ಶಾಹಿ ಮಸೀದಿಯ ಭಾಗಶಃ ತೆರವು ವಿಚಾರವು ಈಗಾಗಲೇ ನ್ಯಾಯಾಲಯದ ಗಮನಕ್ಕೂ ಬಂದಿದೆ. ಸೆಪ್ಟೆಂಬರ್ 9ರಂದು ಮಧ್ಯಪ್ರದೇಶ ಹೈಕೋರ್ಟ್, ರಸ್ತೆ ಅಗಲೀಕರಣಕ್ಕಾಗಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸುವ ಉಜ್ಜಯಿನಿ ಮಹಾನಗರ ಪಾಲಿಕೆಯ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.

ಮಹಾನಗರ ಪಾಲಿಕೆಯ ಪ್ರಕಾರ, ಸಿಂಹಸ್ಥ ಮೇಳದ ಸಂದರ್ಭದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಉಜ್ಜಯಿನಿಗೆ ಆಗಮಿಸುವ ನಿರೀಕ್ಷೆಯಿದ್ದು, ಸಂಚಾರ ವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ರಸ್ತೆ ಅಗಲೀಕರಣ ಅಗತ್ಯವಾಗಿದೆ. ಇದೇ ಯೋಜನೆಯಡಿ 730 ಮೀಟರ್ ಉದ್ದದ ರಸ್ತೆವನ್ನು 15 ಮೀಟರ್ ಅಗಲಕ್ಕೆ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಉಜ್ಜಯಿನಿಯಲ್ಲಿ ಸದ್ಯ ಬಿಗುವಿನ ವಾತಾವರಣ ಮುಂದುವರಿದಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

Trending

Exit mobile version