ಸುತ್ತ ಮುತ್ತ
Viral News ಕಾರುಗಳಿಗೆ ಬಂತು ಬೇಬಿ ಬಂಪ್!
ಚೀನಾ: ನಗರದಲ್ಲಿ ನಿಲ್ಲಿಸಿರುವ ಕಾರುಗಳಿಗೆ ಬೇಬಿ ಬಂಪ್ ಬಂದ ಹಾಗೆ ಕಾಣುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ,
ಹೌದು… ಚೀನಾದಲ್ಲಿ ಹೀಟ್ ವೇವ್‍ನಿಂದಾಗಿ ಕಾರಿನ ಮುಂದಿನ ಭಾಗ ಹಾಗೂ ಹಿಂದಿನ ಭಾಗಗಳು ಉಬ್ಬಿಕೊಂಡಿದೆ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ನೋಡಿದ ನೆಟ್ಟಿಗರು ಬೇಬಿ ಬಂಪ್ ಹಾಗೂ ಗರ್ಭಿಣಿ ಕಾರು ಎಂದು ಕರೆದಿದ್ದಾರೆ,
ಎಕ್ಸ್ ನಲ್ಲಿ ಹಂಚಿಕೊಂಡಿರುವ ಈ ವಿಡಿಯೋವನ್ನು ಈ ವರೆಗೆ 357.2 ಸಾವಿರಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ, ಈ ವಿಡಿಯೋದಲ್ಲಿ ಆಡಿ ಸೇರಿದಂತೆ ಅನೇಕ ವಾಹನಗಳು ಉಬ್ಬಿಕೊಂಡಿರುವುದನ್ನು ನೋಡಬಹುದಾಗಿದೆ,
ಕೆಲವು ಬಳಕೆದಾರರು ಇದು ಸ್ಧಳೀಯವಾಗಿ ತಯಾರಿಸಿದ ಕಾರುಗಳಿಗೆ ಭಿನ್ನವಾಗಿದೆ ಎಂದು ಹೇಳಿಕೊಂಡಿದ್ದಾರೆ, ಅದರೆ ಇನ್ನು ಕೆಲವರು ತೀವ್ರತರವಾದ ಶಾಖದಿಂದಾಗಿ ಹೆಚ್ಚಾಗಿ ಆಫ್ಟರ್ಮಾರ್ಕೆಟ್ ರಕ್ಷಣಾತ್ಮಕ ಹೊದಿಕೆಗಳ ಮೇಲೆ ಪರಿಣಾಮ ಬೀರುತ್ತದೆ, ಇದರಿಂದಾಗಿ ಹೀಗಾಗಿದೆ ಎಂದು ವಾದಿಸಿದ್ದಾರೆ,
ದೇಶ
Rewa Hospital ‘ಇಲ್ಲಿ ಡೆಲಿವರಿ ಮಾಡಿಸಬೇಡಿ’ ಎಂದ ಯುವತಿ: ಹೆರಿಗೆ ಬಳಿಕ ತಾಯಿ-ಮಗು ದಾರುಣ ಸಾವು
ಮಧ್ಯಪ್ರದೇಶ:Rewa Hospital “ನನ್ನನ್ನು ಇಲ್ಲಿಂದ ಮೊದಲು ಕರೆದುಕೊಂಡು ಹೋಗಿ. ಈ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಬೇಡಿ. ಇಲ್ಲಿರುವವರ ಚಿಕಿತ್ಸೆಯಿಂದ ನಾನು ಮತ್ತು ನನ್ನ ಮಗು ಬದುಕುಳಿಯುವುದಿಲ್ಲ” ಎಂದು ಕುಟುಂಬಸ್ಥರಲ್ಲಿ ಕಣ್ಣೀರಿನಿಂದ ಮನವಿ ಮಾಡಿದ್ದ ಯುವತಿಯೊಬ್ಬರು, ಹೆರಿಗೆ ಬಳಿಕ ತನ್ನ ಮಗುವಿನೊಂದಿಗೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ಮೃತ ಯುವತಿಯನ್ನು 25 ವರ್ಷದ Kalpana Mishra ಎಂದು ಗುರುತಿಸಲಾಗಿದೆ. ಹೆರಿಗೆಗೂ ಕೆಲವೇ ಗಂಟೆಗಳ ಮುನ್ನ ಅವರು ಆಸ್ಪತ್ರೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ತಮ್ಮನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬಸ್ಥರಲ್ಲಿ ಅಂಗಲಾಚಿ ಬೇಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಿ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ.
ಡೆಲಿವರಿಗೆ ಮುನ್ನ ಕಣ್ಣೀರಿಟ್ಟ ಯುವತಿ
ಕಲ್ಪನಾ ಅವರನ್ನು ಮಂಗಳವಾರ ಆಗಸ್ಟ್ 25ರಂದು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಅವರಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಆಪರೇಷನ್‌ಗೂ ಮುನ್ನ ಕಲ್ಪನಾ ಆಸ್ಪತ್ರೆಯಲ್ಲಿನ ಚಿಕಿತ್ಸೆ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ತನ್ನನ್ನು ಬೇರೆಡೆಗೆ ಕರೆದೊಯ್ಯುವಂತೆ ಕುಟುಂಬಸ್ಥರಲ್ಲಿ ಮನವಿ ಮಾಡುತ್ತಿದ್ದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ತಾಯಿ-ಮಗು ಇಬ್ಬರೂ ದಾರುಣ ಸಾವು
ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಬಳಿಕ ಕಲ್ಪನಾ ಮತ್ತು ಅವರ ನವಜಾತ ಮಗು ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿ ಮುಂಚಿತವಾಗಿಯೇ ತಮ್ಮ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರೂ, ಸೂಕ್ತವಾಗಿ ಸ್ಪಂದಿಸಲಿಲ್ಲ ಎಂಬುದು ಕುಟುಂಬದ ಪ್ರಮುಖ ಆರೋಪವಾಗಿದೆ.
ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‌ಗಳ ನಿರ್ಲಕ್ಷ್ಯದಿಂದಲೇ ಎರಡು ಜೀವಗಳು ಬಲಿಯಾಗಿವೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ ಎಂಬ ಆರೋಪ
ಕಲ್ಪನಾ ತಮ್ಮ ಆರೋಗ್ಯದ ಸಮಸ್ಯೆ ಬಗ್ಗೆ ಪದೇಪದೇ ಹೇಳಿಕೊಂಡಿದ್ದರು. ಆದರೆ ಆಸ್ಪತ್ರೆಯ ಸಿಬ್ಬಂದಿ ಅವರ ದೂರಿಗೆ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.
ಚಿಕಿತ್ಸೆ ನೀಡುವ ಬದಲು ವೈದ್ಯರು ಹಾಗೂ ನರ್ಸ್‌ಗಳು ಕಲ್ಪನಾ ಮತ್ತು ಅವರ ಕುಟುಂಬದವರೊಂದಿಗೆ ನಿರ್ಲಕ್ಷ್ಯದಿಂದ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ
ತಾಯಿ ಮತ್ತು ಮಗು ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಎದುರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಅವರು, ವೈದ್ಯರು ಮತ್ತು ಸಿಬ್ಬಂದಿಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಯ ಡೀನ್ ಸುನಿಲ್ ಅಗರ್‌ವಾಲ್ ಹಾಗೂ ಸೂಪರಿಂಟೆಂಡೆಂಟ್ ರಾಹುಲ್ ಮಿಶ್ರಾ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶ ಹೊರತರಲಾಗುವುದು ಎಂದು ಭರವಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದ ವೈರಲ್ ವಿಡಿಯೋ ಹಾಗೂ ಕುಟುಂಬಸ್ಥರ ಆರೋಪಗಳ ಆಧಾರದ ಮೇಲೆ ತನಿಖೆ ಮುಂದುವರಿದಿದ್ದು, ಕಲ್ಪನಾ ಮತ್ತು ಅವರ ಮಗುವಿನ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖಾ ವರದಿಯಿಂದ ತಿಳಿದುಬರಬೇಕಿದೆ.
ದೇಶ
Nepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
ನೇಪಾಳ: ಭೀಕರ ಪ್ರವಾಹದಿಂದ ತತ್ತರಿಸಿರುವ Nepal ದಲ್ಲಿ ಮಾನವೀಯತೆಯನ್ನೇ ಪ್ರಶ್ನಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದ ಮಹಿಳೆಯ ಮೃತದೇಹದಿಂದ ಚಿನ್ನದ ಕಿವಿಯೋಲೆಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ.
ನೇಪಾಳದ ನಾರಾಯಣಿ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದ ಮಹಿಳೆಯ ಮೃತದೇಹವನ್ನು ದಡಕ್ಕೆ ಎಳೆದು ತರುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಆಕೆಯ ಕಿವಿಯೋಲೆಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ 41 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಪೊಲೀಸರ ಗಮನಕ್ಕೆ ಬಂದಿದೆ.
ವೈರಲ್ ವಿಡಿಯೋದಲ್ಲಿ ಏನಿತ್ತು?
ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಯುವಕರು ಮರದ ಹಲಗೆಗಳ ಸಹಾಯದಿಂದ ನೀರಿನಲ್ಲಿ ತೇಲಿ ಬಂದ ಮಹಿಳೆಯ ಮೃತದೇಹವನ್ನು ದಡದತ್ತ ಎಳೆದು ತರುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ತಲೆಯ ಕೂದಲನ್ನು ಹಿಡಿದು ಮೃತದೇಹವನ್ನು ಎಳೆದಾಡಿದ್ದಾರೆ.
ನಂತರ ಮಹಿಳೆಯ ಎರಡೂ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ತೆಗೆದು ಒಂದು ಬದಿಗೆ ಇಡುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಕಂಡುಬಂದಿದೆ. ಸಮೀಪದಲ್ಲಿದ್ದ ಕೆಲವರು ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ನೇಪಾಳ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ಯಾರು?
ಚಿಟ್ವಾನ್ ಪೊಲೀಸರು ನಡೆಸಿದ ತನಿಖೆಯಲ್ಲಿ ಮೃತ ಮಹಿಳೆ ಪ್ರವಾಹದ ಸಂದರ್ಭದಲ್ಲಿ ನಾರಾಯಣಿ ನದಿಗೆ ಕೊಚ್ಚಿಹೋಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ವೈರಲ್ ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿದ ಪೊಲೀಸರು 25 ವರ್ಷದ ಮದನ್ ಗುರುಂಗ್ ಮತ್ತು 38 ವರ್ಷದ ಉಮೇಶ್ ಚೌಧರಿ ಅವರನ್ನು ಬಂಧಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಗುರುವಾರ ಭಾರತ್ಪುರ ಮಹಾನಗರ-1ರ ಪೊಖರಾ ಬಸ್ ಪಾರ್ಕ್ ಸಮೀಪ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರವಾಹದ ನಡುವೆ ಮುಂದುವರಿದ ರಕ್ಷಣಾ ಕಾರ್ಯ
ನೇಪಾಳದಲ್ಲಿ ಭೀಕರ ಪ್ರವಾಹದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತರ ಮೇಲೆ ದರೋಡೆ ಅಥವಾ ಯಾವುದೇ ರೀತಿಯ ಅಮಾನವೀಯ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೇಪಾಳ ಪೊಲೀಸರು ಎಚ್ಚರಿಸಿದ್ದಾರೆ.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
-
ರಾಜ್ಯ9 ಗಂಟೆಗಳು agoST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ
-
ದೇಶ8 ಗಂಟೆಗಳು agoRewa Hospital ‘ಇಲ್ಲಿ ಡೆಲಿವರಿ ಮಾಡಿಸಬೇಡಿ’ ಎಂದ ಯುವತಿ: ಹೆರಿಗೆ ಬಳಿಕ ತಾಯಿ-ಮಗು ದಾರುಣ ಸಾವು
-
ರಾಜ್ಯ16 ಗಂಟೆಗಳು agoB Nagendra ರಾಜೀನಾಮೆ: ಡಿಕೆ ಶಿವಕುಮಾರ್ ಹೇಳಿದ್ದೇನು? ಬಿಜೆಪಿ ವಿರುದ್ಧ ಸಿಎಂ ಗರಂ, ‘ನಾಗೇಂದ್ರ ನಿರಪರಾಧಿ’ ಎಂದ ಡಿಸಿಎಂ
-
ಬೆಂಗಳೂರು16 ಗಂಟೆಗಳು agoBengaluru ನಲ್ಲಿ ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ಬಂಧನ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಅಲರ್ಟ್!
-
ದೇಶ16 ಗಂಟೆಗಳು agoNepal-Tibet ಪ್ರವಾಹದ ಭೀಕರ ದೃಶ್ಯ ಚೀನಾದಲ್ಲಿ ಕಾಣೆಯಾಗಿದ್ದೇಕೆ? ವೈರಲ್ ವಿಡಿಯೋಗೆ ಸೆನ್ಸಾರ್!
-
ರಾಜಕೀಯ16 ಗಂಟೆಗಳು agoRamakrishna Hegde ಜನ್ಮಶತಮಾನೋತ್ಸವ: ಬಿಜೆಪಿ ಗೆಲುವನ್ನು ಮೊದಲೇ ಊಹಿಸಿದ್ದ ಕರ್ನಾಟಕದ ಧೀಮಂತ ನಾಯಕ!
-
ದೇಶ9 ಗಂಟೆಗಳು agoNepal ದಲ್ಲಿ ಪ್ರವಾಹದ ಆರ್ಭಟ: ತೇಲಿಬಂದ Bank ಲಾಕರ್ ಒಡೆದು ಲಕ್ಷಾಂತರ ರೂಪಾಯಿ ಕಳವು
-
ದೇಶ16 ಗಂಟೆಗಳು agoGuru Raghavendra Swamy ಆರಾಧನೆಗೆ ಭಕ್ತರ ಮಹಾಪೂರ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಅದ್ಧೂರಿ ಆಚರಣೆ
