ರಾಜಕೀಯ
ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ಪಕ್ಷದ ನೇತೃತ್ವ ಯಾರು?
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು? ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.
ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿನಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, “ವೈಚಾರಿಕವಾಗಿ ಪ್ರಗತಿಪರ ತತ್ವಸಿದ್ದಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ” ಎಂದು ಹೇಳಿದರು.
ಯತೀಂದ್ರನ ಮಾತಿನಲ್ಲಿ, “ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ವೈಚಾರಿಕವಾಗಿ ಪ್ರಗತಿಪರ ಸಿದ್ಧಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶನ ನೀಡುವ ಒಬ್ಬ ನಾಯಕ ಅವಶ್ಯಕ. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿಯನ್ನು ವಹಿಸಲು ಸಮರ್ಥ” ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ, “ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗುವಂತೆ ನಮ್ಮನ್ನು ಮುನ್ನಡೆಸುವ ನಂಬಿಕೆ ಇದೆ. ತತ್ವಬದ್ಧತೆ ಇರುವ ನಾಯಕರು ಸಿಗುವುದು ಕಷ್ಟ. ಆ ಕೆಲಸವನ್ನು ಜಾರಕಿಹೊಳಿ ಅವರು ಮಾಡುತ್ತಿದ್ದಾರೆ, ಇದೇ ರೀತಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸುತ್ತೇವೆ” ಎಂದರು.